ಮುಂಡಾಜೆ : ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ – 2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಜಲದಿಂದ ಸುರಕ್ಷತೆ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಗ್ರಾಮಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಹಾಗೂ ಅಧ್ಯಾಪಕ ವೃಂದದವರಿಗೆ ಕುಡಿಯುವ ನೀರಿನ ಗುಣಮಟ್ಟದ ಕುರಿತು ಪ್ರಾಯೋಗಿಕವಾಗಿ ತರಬೇತಿಯನ್ನು ಡಿ.29ರಂದು ಹಮ್ಮಿಕೊಳ್ಳಲಾಯಿತು.
ಈ ತರಬೇತಿಯಲ್ಲಿ ಒಟ್ಟು 58 ಮಂದಿ ಭಾಗವಹಿಸಿದರು. ಈ ತರಬೇತಿಯಲ್ಲಿ ಉಜಿರೆಯ ಎಸ್. ಡಿ. ಎಮ್. ಸಂಸ್ಥೆಯ ಸ್ನಾತಕೋತ್ತರ ವಿಭಾಗದ ಎಮ್. ಎಸ್. ವಿದ್ಯಾರ್ಥಿ, ವಿದ್ಯಾರ್ಥಿನಿಯವರು ಭಾಗವಹಿಸಿದರು. ಈ ತರಬೇತಿಯನ್ನು ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿ ಪುಷ್ಪಲತಾರವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ತರಬೇತಿಯನ್ನು ನೀಡಿದರು.