ಉಜಿರೆ: ಶ್ರೀ ಧ. ಮಂ. ಅ. ಹಿ ಪ್ರಾ ಶಾಲೆಯಲ್ಲಿ “ಕುವೆಂಪುರವರಿಗೆ ನುಡಿ ನಮನ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿಗಳ ಪರಿಚಯ ಕಾರ್ಯಕ್ರಮ”

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿಯ ಸಾಹಿತ್ಯ ಸಂಘದ ನೇತೃತ್ವದಲ್ಲಿ ರಾಷ್ಟ್ರಕವಿ ಕುವೆಂಪುರವರ 118ನೇ ಜನ್ಮ ದಿನಾಚರಣೆಯ ಪ್ರಯುಕ್ತ “ಕುವೆಂಪುರವರಿಗೆ ನುಡಿ ನಮನ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿಗಳ ಪರಿಚಯ ಕಾರ್ಯಕ್ರಮ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಐದು ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳು ಸೇರಿ ಕುವೆಂಪುರವರ ಪ್ರಸಿದ್ಧವಾದ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಇಚಿಲಂಪಾಡಿ ಆಗಮಿಸಿದ್ದರು. ಸಾಹಿತ್ಯ ಸಂಘದ ಮಾರ್ಗದರ್ಶಕ ಶಿಕ್ಷಕಿ ಶ್ರೀಮತಿ ರೇವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶೈಮ ಕುವೆಂಪುರವರ ಪರಿಚಯವನ್ನು ಮತ್ತು ವಿದ್ಯಾರ್ಥಿನಿ ರಕ್ಷಿತ ಜ್ಞಾನಪೀಠ ಪ್ರಶಸ್ತಿಯ ಹಿನ್ನೆಲೆ ಮತ್ತು ಮಹತ್ವವನ್ನು ಸಭೆಗೆ ತಿಳಿಯಪಡಿಸಿದರು. ಇದೇ ಸಂದರ್ಭದಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಕರಕುಶಲತೆಯಿಂದ ಮೂಡಿಬಂದ ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿಗಳ ಪರಿಚಯವನ್ನು ತಿಳಿಸುವ ಬಿತ್ತಿ ಪತ್ರವನ್ನು ಅತಿಥಿಯವರ ಅಮೃತಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಅತಿಥಿ ಭಾಷಣದಲ್ಲಿ ಮಹಾವೀರ್ ಜೈನ್ ಅವರು ಕುವೆಂಪುರವರ ಜೀವನ ಸಿದ್ಧಾಂತವನ್ನು ಪರಿಚಯ ಮಾಡಿಕೊಡುತ್ತಾ ಕುವೆಂಪುರವರು ಜ್ಞಾನ ಮತ್ತು ಸದ್ಗುಣಕ್ಕೆ ನೀಡಿದ ಪ್ರಾಮುಖ್ಯತೆಯನ್ನು ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ವಿದ್ಯಾರ್ಥಿನಿ ಸಿಂಚನ ಸ್ವಾಗತಿಸಿದರು. ವಿದ್ಯಾರ್ಥಿನಿ ತ್ರಿಶಾ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ಅನನ್ಯ ಕುಮಾರಿ ನೆರವೇರಿಸಿದರು.

LEAVE A REPLY

Please enter your comment!
Please enter your name here