ಪತ್ರಿಕಾಗೋಷ್ಠಿ
ಬೆಳ್ತಂಗಡಿ: ‘ಭ್ರಷ್ಟಾಚಾರ ಅಳಿಸಿ, ನೇತ್ರಾವತಿ ಉಳಿಸಿ’ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ಅವರು ಜ .2 ರಂದು ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಹಾಗೂ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಜ.7 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನೇತ್ರಾವತಿ ಉಳಿಸಿ ಭ್ರಷ್ಟಾಚಾರ ನಿಲ್ಲಿಸಿ ಹಾಗೂ ವಿವಿಧ ವಿಚಾರಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಮುಂಡಾಜೆಯಿಂದ ಉಪ್ಪಿನಂಗಡಿಯವರೆಗೆ ಹಾಗೂ ಬೆಳ್ತಂಗಡಿಯಲ್ಲಿ ಹಕ್ಕೊತ್ತಾಯ ಸಭೆಯು ನಡೆಯಲಿದ್ದು,
ಈ ಸಭೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆಯೇ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಾಗಲಿ ನನಗಾಗಲಿ ಯಾವುದೇ ಮಾಹಿತಿ ಇಲ್ಲ ಜ 07 ರಂದು ನಡೆಯುವ ಪ್ರತಿಭಟನೆ ಪಕ್ಷದ ಅಧಿಕೃತ ಕಾರ್ಯಕ್ರಮವಾಗಿದ್ದು ಜ 08 ರಂದು ನಡೆಯುವ ಜಾಥ ಅವರ ವೈಯಕ್ತಿಕ ಕಾರ್ಯಕ್ರಮವಾಗಿದೆ ಅದ್ದರಿಂದ ಅದಕ್ಕೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಗಂಗಾಧರ್ ಗೌಡ, ಶೈಲೇಶ್ ಕುಮಾರ್, ರಂಜನ್ ಗೌಡ, ಎ.ಸಿ ಮ್ಯಾಥ್ಯೂ, ಜಗದೀಶ್ ಡಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.