





ವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಬಗ್ಗೆ ಕುಕ್ಕೇಡಿ-ನಿಟ್ಟಡೆ ಗ್ರಾಮಗಳ ಗ್ರಾಮ ಸಮಿತಿಯ ಸಭೆಯು ನಿಟ್ಟಡೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.




ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ ರವರು ಮಾತನಾಡಿ, ಬ್ರಹ್ಮಕಲಶೋತ್ಸವದಲ್ಲಿ ಕುಕ್ಕೇಡಿ-ನಿಟ್ಟಡೆ ಗ್ರಾಮಸ್ಥರು ಸಕ್ರೀಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು. ವಿವಿಧ ಸಮಿತಿ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಪೂಜಾರಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸತೀಶ್ ಕೆರಿಯರ್, ಕಾರ್ತಿಕ್ ಅಮೈ, ಪ್ರಶಾಂತ್ ಹೆಗ್ಡೆ ಉಪಸ್ಥಿತರಿದ್ದರು.








