ದ.ಕ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

0

ಉಜಿರೆ :ದ. ಕ. ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟನೆ ಜ.5 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಉದ್ಘಾಟಿಸಿದರು. ಸಮ್ಮೇಳನದ ಸಂಯೋಜನಾ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪಿ. ಶ್ರೀನಾಥ್, ಸ್ವಾಗತ ಸಮಿತಿ ಅಧ್ಯಕ್ಷ ಯದುಪತಿ ಗೌಡ, ಸಮ್ಮೇಳನ ಸಂಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್, ವಿವಿಧ ಉಪ ಸಮಿತಿಗಳ ಸಂಚಾಲಕರುಗಳಾದ ಮೋಹನ್ ಶೆಟ್ಟಿಗಾರ್, ರಾಜೇಶ್ ಬಿ., ರಮೇಶ್ ಮೈಯ, ಶುಭಾಸ್ ಬೋಳಾರ್, ಪ್ರಮೋದ್ ಆರ್. ನಾಯಕ್, ಸುನಿಲ್ ಪಂಡಿತ್, ಹರ್ಷ ಕುಮಾರ್ ಮೊದಲಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here