ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಅಕ್ಷರ ದಾಸೋಹದ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಶಾರದಾರವರನ್ನು ಅಕ್ಷರ ದಾಸೋಹದ ವತಿಯಿಂದ ಸನ್ಮಾನ ಕಾರ್ಯಕ್ರಮ ಜರಗಿತು.
ಶಾಲೆಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಂತೋಷ್ ಸಲ್ದಾನರವರು ಸನ್ಮಾನವನ್ನು ನೆರವೇರಿಸಿ ಶುಭಹಾರೈಸಿದರು.
ತನ್ನ ವೃತ್ತಿ ಜೀವನದಲ್ಲಿ ಅತ್ಯಂತ ತಾಳ್ಮೆಯಿಂದ, ಪ್ರಾಮಾಣಿಕವಾಗಿ ಅಡುಗೆ ಸಹಾಯಕರಾಗಿ ದುಡಿದು, ಮಕ್ಕಳ ಪ್ರೀತಿಯ ಅಮ್ಮನಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಶಾರದಾರವರ ಸೇವೆಯನ್ನು ಗುರುತಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ , ಶಿಕ್ಷಕರು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.