ವೇಣೂರು: ಬಡಗಕಾರಂದೂರು ಸಮೀಪದ ನಡಾಯಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಅಹಿಂಸಾತ್ಮಕ ವಾಗಿ ಗೋಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಜ.4ರಂದು ಬೆಳಗ್ಗಿನ ಜಾವ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು, ಐವರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದು ಕೋರ್ಟು 13 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಗಳಾದ ಕರಾಯ ಗ್ರಾಮದ ಜನತಾ ಕಾಲನಿ ನಿವಾಸಿ ತೌಸೀಫ್ (32ವ) ಪುತ್ತಿಲ ಗ್ರಾಮದ ಮಣಿಲ ಮನೆ ಉಸ್ಮಾನ್(55ವ), ಪುತ್ತೂರು ತಾಲೂಕು ವಳಾಲು ಗ್ರಾಮದ ಬಜತ್ತೂರಿನ ನಿವಾಸಿ ಇಕ್ಬಾಲ್ (34ವ), ಕರಾಯ ಗ್ರಾಮದ ಜನತಾ ಕಾಲನಿ ನಿವಾಸಿ ಇರ್ಫಾನ್(25ವ), ಕರಾಯ ಗ್ರಾಮದ ಜನತಾ ಕಾಲನಿ ನಿವಾಸಿ ಅನಾಸ್(23ವ) ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳ ಮೇಲೆ ವೇಣೂರು ಠಾಣೆಯಲ್ಲಿ ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ 2020ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಳದಂಗಡಿ ಪರಿಸರದಲ್ಲಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಹಲವಾರು ದೂರುಗಳಿದ್ದು ಈ ಬಗ್ಗೆ ವೇಣೂರು ಎಸ್.ಐ. ಸೌಮ್ಯ,ಎ.ಎಸ್.ಐ ವೆಂಕಟೇಶ್,ಸಿಬ್ಬಂದಿಗಳಾದ ಅಭಿಜಿತ್, ಪ್ರಶಾಂತ್, ರಾಜೇಶ್, ಸಚಿನ್, ಹನುಮಂತ್,ತ್ರಿಮೂರ್ತಿ ಹಾಗೂ ತಂಡ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಬಡಗಕಾರಂದೂರು ಗ್ರಾಮದ ನಡಾಯಿ ಎಂಬಲ್ಲಿ ನಾರಾವಿ-ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ಗುರುವಾಯನಕೆರೆ ಕಡೆ ಅನುಮಾನಾಸ್ಪದವಾಗಿ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿ ಬಂದವರನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಈ ಗೋಕಳ್ಳ ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು. ಹಿಂದಿನಿಂದ ಬರುತ್ತಿದ್ದ ಓಮ್ನಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಐದು ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ ತುಂಬಿ ಸಾಗಾಟ ಗುರುವಾಯನಕೆರೆ ಕಡೆಗೆ ಅಕ್ರಮ ಕಸಾಯಿ ಖಾನೆಗೆ ಮಾಡುತ್ತಿರುವುದು ಕಂಡು ಬಂದಿತ್ತು. ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕೂಡಲೇ ಐದು ಜಾನುವಾರುಗಳೊಂದಿಗೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿಯಲ್ಲಿ ಕೈ ಕಾಲುಗಳನ್ನು ಕಟ್ಟಿ ಅತ್ಯಂತ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಾಟ ಮಾಡಲಾಗಿತ್ತು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರುತಿ ಕಾರಿನಲ್ಲಿ ಜಾನುವಾರುಗಳನ್ನು ತುಂಬಿಸಿ, ಅದರ ಎದುರಿನಿಂದ ದ್ವಿಚಕ್ರವಾಹನದಲ್ಲಿ ಇಬ್ಬರು ಬೆಂಗವಲಾಗಿ ಹೋಗುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಮಾರುತಿ ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.