Site icon Suddi Belthangady

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ನಡ : ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ 15 ವರ್ಷಗಳಿಂದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ, ಸೇವಾ ನಿವೃತ್ತಿ ಹೊಂದಿದ ಶೋಭಾನಂದ ಕುಮಾರ್ ರವರ ಬೀಳ್ಕೊಡುಗೆ ಸಮಾರಂಭವು ಡಿ.31 ರಂದು ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ನಡ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಆರಿಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆoಟನಿ ಟಿ. ಪಿ.,ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಣ್ಣಿ, ದ. ಕ. ಜಿಲ್ಲಾ ಲಿಪಿಕ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಾಕೂಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶೋಭಾನಂದ ಕುಮಾರ್, ಅವರ ಧರ್ಮಪತ್ನಿ ಶ್ರೀಮತಿ ವಾಣಿ ಎಸ್., ಪುತ್ರಿ ಕುಮಾರಿ ಸುಷ್ಮ -ಇವರುಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಾದ ನಿತೇಶ್, ಸುಹಾನಬಾನು, ಆದಿತ್ಯ -ಸನ್ಮಾನಿ ತರ ಗುಣಗಾನ ಗೈದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪ ಡಿ. ಸ್ವಾಗತಿಸಿ, ವಿದ್ಯಾರ್ಥಿನಿಯರಾದ ತೃಪ್ತಿ, ದೀಪ್ತಿ, ದೀಕ್ಷ, ಅಶ್ವಿತ, ಬಿಸ್ಮಿತ ಪ್ರಾರ್ಥನೆ ಗೈದರು. ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿ. ವಿ., ಶ್ರೀಮತಿ ಸುಕೇತ ಸಹಕರಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಮೋಹನ ಗೌಡ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Exit mobile version