ಜ.31-ಫೆ.6: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಲ್ಮಂಜ : ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 31ರಿಂದ ಫೆ. ೦6ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜ.8ರಂದು ಬಿಡುಗಡೆಗೊಳಿಸಿ ಶುಭಕೋರಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ತುಕಾರಾಮ ಸಾಲಿಯನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ವಿಜಯ್ ನಿಡಿಗಲ್, ಉಪ ಸಮಿತಿಗಳ ಪ್ರಮುಖರಾದ ವೆಂಕಟರಮಣ ಶೆಟ್ಟಿ, ಕುಮಾರನಾಥ ಶೆಟ್ಟಿ, ಸುಂದರ ಗೌಡ ಬಜಿಲ, ರಜನೀಶ್. ವ್ಯವಸ್ಥಾಪನ ಸಮಿತಿ ಸದಸ್ಯರಾದ ವಸಂತ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here