ಪುಂಜಾಲಕಟ್ಟೆ: ಸ.ಪ್ರ.ದ. ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯನ್ನು ಜ. 9 ರಂದು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವೇಣೂರು ಆರಕ್ಷಕ ಠಾಣೆ ಠಾಣಾಧಿಕಾರಿ ಸೌಮ್ಯ ಜಿ ಮಾತನಾಡಿ ಆಗಮಿಸಿದ ಪೋಷಕರು ಮನೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಬೇಕೆಂದು ಮತ್ತು ಮೊಬೈಲ್ ಬಳಕೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಅರಿವುವನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕು. ರಾಫೀಯಾ ಮತ್ತು ರಾಜ್ಯಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಯಾದ ಕು. ದೀಕ್ಷಾರವರನ್ನು ಸನ್ಮಾನಿಸಲಾಯಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹಳ್ಳಿಮನೆ ಹೈದರಾಲಿ ರವರನ್ನು ಸನ್ಮಾನಿಸಲಾಯಿತು. ನಂತರ ನೂತನ ಕಾರ್ಯಕಾರಿ ಸಮಿತಿ ರಚನೆಯ ಬಗ್ಗೆ ವಿಚಾರ ವಿನಿಮಯ ನಡೆಯಿತು .ಪೋಷಕರು ಕಾಲೇಜಿನ ಬಗ್ಗೆ ಒಳ್ಳೆಯ ಅಭಿಪ್ರಾಯಗಳನ್ನು ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ ಕೆ ಶರತ್ ಕುಮಾರ್ ಕಾಲೇಜಿನ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ,ಆದ್ದರಿಂದ ಕಾಲೇಜಿನ ಅಭಿವೃದ್ಧಿಗೆ ಶಿಕ್ಷಕ ರಕ್ಷಕ ಸಂಘದವರು ಸಹಕಾರ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ IQAC ಸಂಚಾಲಕ ಡಾ. ಲೋಕೇಶ ,ಸಂಘದ ಸಂಚಾಲಕ ಖಂಡೋಜಿ ಲಮಾಣಿ, ವಿದ್ಯಾರ್ಥಿಗಳ ಪೋಷಕರು, ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಸಂಚಾಲಕ ಸಂತೋಷ್ ಪ್ರಭು ಅವರು ಸ್ವಾಗತಿಸಿ, ಡಾ. ವೈಶಾಲಿ ಯು ನಿರೂಪಿಸಿ, ಪ್ರೊ. ಕುಮಾರ್ ಸಿ ಅವರು ವಂದಿಸಿದರು.

LEAVE A REPLY

Please enter your comment!
Please enter your name here