ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಸಂಘದ 28ನೇ ವರ್ಷದ ವಾರ್ಷಿಕೋತ್ಸವ, ಸನ್ಮಾನ, ಪುಸ್ತಕ ವಿತರಣಾ ಕಾರ್ಯಕ್ರಮವು ಜ.8 ರಂದು ಅರಸಿನಮಕ್ಕಿ ಕುಲಾಲರ ಸಂಘದ ಸಭಾಭವನದ ಕುಂಭಶ್ರೀ ವೇದಿಕೆಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್, ಪಿಲಾತ್ತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಅತ್ತಾಜೆ, ಗುರುವಾಯನಕೆರೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಲಾ ಕುಂಭ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ನಾಗೇಶ್ ಕುಲಾಲ್ ರವರನ್ನು ಸನ್ಮಾನಿಸಲಾಯಿತು. ಸುಮಾರು 50 ಮಕ್ಕಳಿಗೆ ಪೆನ್ನು, ಪುಸ್ತಕವನ್ನು ವಿತರಣೆ ಮಾಡಲಾಯಿತು. ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ದೀಪಿಕಾ ಕೊಕ್ಕಡ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಯತೀಶ್ ಉಡ್ಯೇರೆ ವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮಾನಸ, ಶ್ರಾವ್ಯ, ಶ್ರವಣ್ ಪ್ರಾರ್ಥಿಸಿದರು. ಮಹಿಳಾ ಒಕ್ಕೂಟದ ಜೊತೆ ಕಾರ್ಯದರ್ಶಿ ಹೇಮಾವತಿ ಹೃಷಿಕೇಶ ಕುಲಾಲ್ ಸ್ವಾಗತಿಸಿದರು. ಕಟ್ಟಡ ನಿಧಿ ಅಧ್ಯಕ್ಷ ಕೆ. ಕೃಷ್ಣಪ್ಪ ಕುಲಾಲ್ ಪ್ರಾಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿ ಯು.ಸಿ. ಕುಲಾಲ್ ವರದಿ ವಾಚಿಸಿದರು. ವಿದ್ಯಾರ್ಥಿ ನಿಧಿ ಮಾಜಿ ಅಧ್ಯಕ್ಷ ಅಶೋಕ್ ಕುಲಾಲ್ ವಂದಿಸಿದರು. ವಿದ್ಯಾರ್ಥಿ ನಿಧಿ ಕಾರ್ಯದರ್ಶಿ ಪ್ರವೀಣ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.
ಮಧ್ಯಾಹ್ನ ಹವ್ಯಾಸಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.