ಬೆಳ್ತಂಗಡಿ : ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲಾ ಯುವಜನ ಒಕ್ಕೂಟದ ವತಿಯಿಂದ ವಿವೇಕ ರಥ ಯುವಪಥ ಎಂಬ ಘೋಷಣೆಯಡಿಯಲ್ಲಿ ಯುವಜಾಗೃತಿ ಜಾಥಾ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲಿರುವ ಜಾಥವು ಜ.13 ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದೆ.
ಯುವ ಜಾಗೃತಿ ಜಾಥವು ಜ.12 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದ್ದು ಜನವರಿ 13 ರಂದು ಬೆಳ್ತಂಗಡಿ ತಾಲೂಕಿನ ಹೊಸಂಗಡಿಗೆ ಬೆಳಿಗ್ಗೆ 9-೦೦ ಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಜಾಥವನ್ನು ತಾಲೂಕು ಯುವಜನ ಒಕ್ಕೂಟ, ಪ್ರೆಂಡ್ಸ್ ಕ್ಲಬ್ ಹೊಸಂಗಡಿ, ಹಾಗೂ ಸ್ಥಳೀಯ ಸಂಘಟನೆಗಳು ಅದ್ದೂರಿಯಾಗಿ ಸ್ವಾಗತಿಸಿ ವಾಹನ ಜಾಥದ ಮೂಲಕ ಬೆಳ್ತಂಗಡಿ ಬಸ್ಸು ನಿಲ್ದಾಣದ ಮೂಲಕ ಆಗಮಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ಇರುವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್ ಹಾಗೂ ಪ್ರತಾಪ ಸಿಂಹ ನಾಯಕ್ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಬಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ಕೋಟ್ಯಾನ್, ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಉಪನ್ಯಾಸಕ ಸ್ಮಿತೇಶ್ ಎಸ್ ಬಾರ್ಯ ಆಪ್ತ ಸಮಾಲೋಚಕರು ಹಾಗೂ ಮಹಾವೀರ್ ಜೈನ್ ಕನ್ನಡ ಉಪನ್ಯಾಸಕರು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ಉಜಿರೆ. ಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ರಮಾನಂದ ಸಾಲ್ಯಾನ್ ಮುಂಡೂರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಯುವಕ-ಯುವತಿ ಮಂಡಳಿಗಳು ಹವ್ಯಾಸಿ ಮಂಡಳಿಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ಪ್ರಧಾನ ಕಾರ್‍ಯದರ್ಶಿ ಕೆ. ಸದಾಶಿವ ಹೆಗ್ಡೆ ವಿನಂತಿಸಿದ್ದಾರೆ
ಜ.13: ವಿವೇಕ ರಥ ಯುವ ಪಥ ಜಾಥಾ ಬೆಳ್ತಂಗಡಿಗೆ
p>