ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

0

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಜ. 12ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಆಗಮಿಸಿ ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು, ವಿವೇಕಾನಂದರ ಜೀವನ ಶೈಲಿಯನ್ನು ಮಕ್ಕಳಿಗೆ ಕಥೆಗಳ ಮೂಲಕ ಮನವರಿಕೆ ಆಗುವ ರೀತಿಯಲ್ಲಿ ಬಹಳ ಅದ್ಭುತವಾಗಿ ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿವೇಕಾನಂದರು ಬಾಲ್ಯದ ದಿನಗಳಲ್ಲಿ ಯಾವ ರೀತಿ ತಮ್ಮ ಜೀವನ ಶೈಲಿಯನ್ನು ಅಳವಡಿಸಿಕೊಂಡಿದರು ಎಂದು ತಿಳಿಸಿದರು. ಶಾಲೆಯ ಹಿರಿಯ ಶಿಕ್ಷಕ ಜೋಸೆಫ್ ರವರು ವಿವೇಕಾನಂದರ ಬಗ್ಗೆ ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಿಶಾಂತ್ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ ನಿರೂಪಿಸಿದರು. ಶ್ರೀಮತಿ ಸುಜಾತಾ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here