ವಾಣಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ

0

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮ ವಿಶ್ವಾಸವನ್ನು ಬೆಳೆಸಿಕೊಂಡು ಧೈರ್ಯದಿಂದ ಮುನ್ನಡೆಯಬೇಕು ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರವಿ ಎಂ.ಎನ್ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಯುವ ಜನರು ಜೀವನದಲ್ಲಿ ಉತ್ತಮವಾದ ಧ್ಯೇಯೋದ್ದೇಶಗಳನ್ನು ಮೈಗೂಡಿಸಿಕೊಳ್ಳಬೇಕು. ರಾಷ್ಟ್ರಪ್ರೇಮ ಮತ್ತು ರಾಷ್ಟ್ರೀಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಮಾನವೀಯತೆಯಿಂದ ಎಲ್ಲರನ್ನು ಸಮಾನತೆಯಿಂದ ಕಾಣಬೇಕು. ವಿವೇಕಾನಂದರ ಆದರ್ಶಗಳನ್ನು ಪಾಲಿಸುವಂತವರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಬಿ, ಘಟಕ ನಾಯಕರಾದ ರಾಮಕೃಷ್ಣ ಶರ್ಮ ಹಾಗೂ ಕು|ಆಶಿಕಾ ಉಪಸ್ಥಿತರಿದ್ದರು. ಕು| ಲಾವಣ್ಯ ಸ್ವಾಗತಿಸಿದರು. ನೆವಿಲ್ ನವೀನ್ ಮೋರಸ್ ಧನ್ಯವಾದವಿತ್ತರು. ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here