ಧರ್ಮಸ್ಥಳ :ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ.), (ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ನ ಆಡಳಿತಕ್ಕೊಳಪಟ್ಟಿದೆ ಶ್ರೀ ಕ್ಷೇತ್ರ ಧರ್ಮಸ್ಥಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 28ನೇ ವರ್ಷದ ರಾಜ್ಯಮಟ್ಟದ ಜ್ಞಾನವಿಕಾಸ ಮತ್ತು ಜ್ಞಾನಪ್ರಕಾಶ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭ ಜ.14 ರಂದು ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ವೈದ್ಯರು, ಲೇಖಕರು ಮತ್ತು ಕ್ವಿಜ್ ಮಾಸ್ಟರ್ ಡಾ. ನಾ. ಸೋಮೇಶ್ವರ ಶುಭ ಶಂಸನೆ ಗೈದರು.
ಕರ್ನಾಟಕ ಸರ್ಕಾರ ಪಠ್ಯ ಸಂಘದ ವ್ಯವಸ್ಥಾಪಕ ನಿರ್ದೇಶಕ ವೀರಣ್ಣ ಎಸ್. ದತ್ತಿ ಸ್ಪರ್ಧೆ ವಿಜೇತರನ್ನು ಪುರಸ್ಕಾರ ಮಾಡಿದರು.
ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಟ್ರಷ್ಠಿ ಡಾ|| ಹೇಮಾವತಿ ವಿ. ಹೆಗ್ಗಡೆ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೆಂದ್ರ ಕುಮಾರ್ , ಶ್ರೀ ಧ. ಮಂ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ್ ತೋಲ್ಪಡಿತ್ತಾಯ, ಉಪಸ್ಥಿತರಿದ್ದರು.
ದ. ಕ. ಮತ್ತು ಉಡುಪಿ ಜಿಲ್ಲೆಯ ತೀರ್ಪುಗಾರರು, ಕ್ಷೇತ್ರದ ವಿಭಾಗದ ಮುಖ್ಯಸ್ಥರು., ವಿಭಾಗ ವಿವಿಧ ಶಾಲೆಗಳ ವಿಜೇತ ವಿದ್ಯಾರ್ಥಿಗಳು, ಹೆತ್ತವರು, ಶಿಕ್ಷಕರು ಹಾಜರಿದ್ದರು.