ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಡಾ. ಡಿ. ಹೆಗ್ಗಡೆಯವರಿಂದ ಬಿಡುಗಡೆ

0

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ೨೧ – ೨೮ರವರೆಗೆ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರು ಮತ್ತು ಶಾಸಕರಾದ ಹರೀಶ್ ಪೂಂಜರವರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ಪಿ. ರಾಜಗೋಪಾಲ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ವಾಮನ ತಾಮ್ಹಣ್‌ಕರ್, ಕಾರ್ಯದರ್ಶಿ ಪದ್ಮಯ್ಯ ಗೌಡ ಉಡ್ಯೇರೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುಧೀರ್ ಕುಮಾರ್ ಎಂ.ಎಸ್., ಕೋಶಾಧಿಕಾರಿಗಳಾದ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಭಿಡೆ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಂಗಾಧರ ಕುಲಾಲ್, ವಿವಿಧ ಸಮಿತಿಗಳ ಸಂಚಾಲಕರಾದ ಧರ್ಮರಾಜ್ ಗೌಡ ಅಡ್ಕಾರಿ, ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here