ವೇಣೂರು ದೇವಸ್ಥಾನದ ಬ್ರಹ್ಮಕಲಶ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

0

ವೇಣೂರು: ಫೆ. 18ರಿಂದ 27ರವರೆಗೆ ಅದ್ದೂರಿಯಾಗಿ ಜರಗಲಿರುವ ಇತಿಹಾಸ ಪ್ರಸಿದ್ದ ಅಜಿಲಸೀಮೆಯ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರನ್ನು ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಭೇಟಿಯಾಗಿ ಆಮಂತ್ರಿಸಲಾಯಿತು.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಡಾ| ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿ, ಸಮಿತಿ ಪದಾಧಿಕಾರಿಗಳನ್ನು ಆಶೀರ್ವದಿಸಿದರು. ಭೇಟಿ ನೀಡಿದ ನಿಯೋಗದಲ್ಲಿ ವ್ಯವಸ್ಥಾನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ತಾಂತ್ರಿಕ ಸಮಿತಿಯ ಯಜ್ಞನಾರಾಯಣ ಭಟ್, ಕೆ. ಭಾಸ್ಕರ ಪೈ, ವಿವಿಧ ಸಮಿತಿ ಪದಾಧಿಕಾರಿಗಳು, ಸದಸ್ಯರು ಜತೆಗಿದ್ದರು.

LEAVE A REPLY

Please enter your comment!
Please enter your name here