ಉಜಿರೆಯಲ್ಲಿ ವ್ಯಸನಮುಕ್ತರಾಗಿ ನವ ಜೀವನ ನಡೆಸುತ್ತಿರುವವರ ನವಜೀವನೋತ್ಸವ

0

ಉಜಿರೆ : ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮಕ್ತಿ ಮತ್ತು ಸಂಶೋಧನ ಕೇಂದ್ರ, ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ ) ಬೆಳ್ತಂಗಡಿ ಮತ್ತು ಗುರುವಾಯನಕೆರೆ ಇದರ ಆಶ್ರಯದಲ್ಲಿ ತಾಲೂಕಿನ ಪಾನಮುಕ್ತರಾಗಿ ಸುಖಿ ಜೀವನ ನಡೆಸುತ್ತಿರುವವರ ನವ ಜೀವನೋತ್ಸವ ಕಾರ್ಯಕ್ರಮವು ಉಜಿರೆ ಲಾಯಿಲದ ಜಾಗೃತಿ ಸೌಧದಲ್ಲಿ ಜ.17 ರಂದು ನಡೆಯಿತು.

ಉದ್ಘಾಟನೆಯನ್ನು ಡಾ| ಎಲ್. ಎಚ್ ಮಂಜುನಾಥ್ ಕಾರ್ಯನಿರ್ವಾಹಕ ನಿರ್ದೇಶಕರು ಶ್ರೀ. ಕ್ಷೇ. ಧ. ಗ್ರಾ. ಯೋ ( ರಿ ) ಧರ್ಮಸ್ಥಳ ನೆರವೇರಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷೆ ಶಾರದಾ ರೈ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್, ಶ್ರೀ ಧ. ಮ. ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಪೂವಣಿ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಿಸ್ ಭಾಗವಸಿದ್ದರು. ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರುಗಳಾದ ಪಿ. ಕೆ. ರಾಜು ಪೂಜಾರಿ, ತಿಮ್ಮಪ್ಪ ಗೌಡ ಬೆಳಾಲು, ಡಿ. ಎ. ರಹಿಮಾನ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಮಾದರಿ ನವಜೀವನ ಸಮಿತಿಗಳಾದ ಬಸವನಗುಡಿ ನವ ಜೀವನ ಸಮಿತಿ ಮಡಂತ್ಯಾರು ವಲಯ , ಶ್ರೀ ಗುರು ನವಜೀವನ ಸಮಿತಿ ಇಲಂತಿಲ, ಕಣಿಯೂರು ವಲಯ, ಬೆಳಾಲು ನವಜೀವನ ಸಮಿತಿ ಸದಸ್ಯರುಗಳನ್ನು ಅಭಿನಂದಿಸಿದರು. ಮಾದರಿ ಪೋಷಕರುಗಳಾದ ರಮೇಶ್ ಇಳಂತಿಲ , ಕಣಿಯೂರು ವಲಯ ರವರನ್ನು ಅಭಿನಂದಿಸಲಾಯಿತು. ನವಜೀವನ ಸಮಿತಿ ಸದಸ್ಯರು, ಜನಜಾಗೃತಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನವಜೀವನ ಸಮಿತಿ ಸದಸ್ಯರು ವ್ಯಸನ ಮುಕ್ತರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.


ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಮೋಹನ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು, ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ ವಂದಿಸಿದರು.

LEAVE A REPLY

Please enter your comment!
Please enter your name here