ನಾವೂರು ಗ್ರಾ.ಪಂ. ನಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ನಾವೂರು : ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಜ.17ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಗಣೇಶ್ ಗೌಡ ರವರ ಅಧಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸಲಾಯಿತ್ತು. ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖ ಬೀದಿ, ಶಾಲೆ ಆವರಣ, ಆಟದ ಮೈದಾನ, ಮತ್ತು ಅನೈರ್ಮಲ್ಯ ಇರುವ ಸ್ಧಳ /ಬೀದಿಗಳನ್ನು ಗುರುತಿಸಿ ಸ್ವಚ್ಚಗೊಳಿಸಲಾಯಿತ್ತು ಮತ್ತು ಜಾಥ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅ.ಅಧಿಕಾರಿ, ಕಾರ್ಯದರ್ಶಿ ,ಊರಿನ ಗಣ್ಯರು, ಜನಪ್ರತಿನಿಧಿಗಳು, ಶಾಲಾ ಮುಖ್ಯೋಪಾಧ್ಯಯರು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ವ್ಯಾಪಾರ ವ್ಯವಹಾರಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here