Site icon Suddi Belthangady

ಶ್ರೀ ಗುರುದೇವ ಪ್ರ. ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2022 -23 ನೇ ಸಾಲಿನ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ಜ. 16 ಮತ್ತು 17 ರಂದು ಕಾಲೇಜು ಸಭಾಂಗಣದಲ್ಲಿ ಜರುಗಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮಾಜಿ ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ಹಾಗೂ ಕೊಯ್ಯೂರು ಸರ್ಕಾರಿ ಪ್ರೌಢಶಾಲೆ ಅಧ್ಯಾಪಕ ರಾಮಚಂದ್ರ ದೊಡ್ಡಮಣಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವೃತ್ತಿ ಮಾರ್ಗದರ್ಶನ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ವಾಣಿಜ್ಯ ವಿಭಾಗದ ಉಪನ್ಯಾಸಕ ಸಮೀವುಲ್ಲಾ ಬಿ.ಎ, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶುಭಲಕ್ಷ್ಮೀ ಉಪಸ್ಥಿತರಿದ್ದರು.

Exit mobile version