ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವರ ಜಾತ್ರಾ ಮಹೋತ್ಸವ

0

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಕ್ಷೇತ್ರದಲ್ಲಿ ಮಕರ ಸಂಕ್ರಮಣ ಆಚರಣೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಕುಣಿತಾ ಭಜನೆ,ರಂಗಪೂಜೆ,ಅನ್ನಸಂತರ್ಪಣೆ ನಡೆಯಿತು.

ಅಲಂಕಾರ ಪೂಜೆ, ಮಹಾಪೂಜೆ, ಶ್ರೀ ದೇವರ ದರ್ಶನ ಬಲಿ, ಚಂದ್ರಮಂಡಲ ಉತ್ಸವ ,ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ‌ ಜರುಗಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ತಿಮ್ಮಣರಸರಾದ ಡಾ. ಪದ್ಮಪ್ರಸಾದ ಅಜಿಲರು, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ಪ್ರಧಾನ ಆರ್ಚಕ ಪ್ರಕಾಶ್ ಹೊಳ್ಳ ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here