ತಣ್ಣೀರುಪಂಥ : ಹಾಡಹಗಲೇ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ

0

ತಣ್ಣೀರುಪಂಥ : ಮಧ್ಯಾಹ್ನ ಹೊತ್ತೇ ಪ್ರತ್ಯಕ್ಷಗೊಂಡ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಜ. 18 ರಂದು ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ.

ಗಣೇಶ್ ಇವರ ಪತ್ನಿ ಪೂರ್ಣಿಮ ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಪುಟ್ಟ ಮಗ ಶಾಲೆಗೆ ಹೋಗಿದ್ದ. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here