ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮೂಹೂರ್ತ

0

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ21 – 28ರವರೆಗೆ ನಡೆಯಲಿದ್ದು ಇದರ ಚಪ್ಪರ ಮೂಹೂರ್ತವು ಪೊಳಲಿ ಶ್ರೀ ಸುಬ್ರಮಣ್ಯತಂತ್ರಿಗಳು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಜ.20 ರಂದು ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ಪಿ. ರಾಜಗೋಪಾಲ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಾಮನ ತಾಮ್ಹಣ್‌ಕರ್, ಕಾರ್ಯದರ್ಶಿ ಪದ್ಮಯ್ಯ ಗೌಡ ಉಡ್ಯೇರೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಕೋಶಾಧಿಕಾರಿಗಳಾದ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಭಿಡೆ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಂಗಾಧರ ಕುಲಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here