ಬೆಳ್ತಂಗಡಿ: ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಕರ್ನಾಟಕ ವತಿಯಿಂದ ವ್ಯವಸ್ಥಿತ ಶಿಕ್ಷಣ ಮತ್ತು ಮತದಾರರ ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ದಕ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವೇಣೂರು ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ರಿತೀಶಾ ಹಾಗೂ ದೀಕ್ಷಿತ್ ಎಸ್.ಹೆಗ್ಡೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ರಾಜ್ಯದ 25 ಸಾವಿರ ಮತದಾರರ ಸಾಕ್ಷರತಾ ಸಂಘಗಳ ಮೂಲಕ, ಶಾಲಾ-ಕಾಲೇಜುಗಳು ನಡೆಸಿದ ಪ್ರಾಥಮಿಕ ಹಂತದ ಕನ್ನಡ ಪ್ರಬಂಧ, ಇಂಗ್ಲಿಷ್ ಪ್ರಬಂಧ, ಚಿತ್ರಕಲೆ ಮತ್ತು ರಸಪ್ರಶ್ನೆಯಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜ. 25 ರಾಷ್ಟ್ರೀಯ ಮತದಾರರ ದಿನದಂದು ಈ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ರಾಜ್ಯಪಾಲರಿಂದ ಬಹುಮಾನ ಸ್ವೀಕರಿಸಲಿದ್ದಾರೆ.
p>