ಉಜಿರೆಯಲ್ಲಿ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

0

ರೋಟರಿ ಕ್ಲಬ್, ಬೆಳ್ತಂಗಡಿ, ಗ್ರಾಮ ಪಂಚಾಯತ್, ಉಜಿರೆ ಹಾಗೂ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ಬಿ.ಹ್ಯೂಮನ್ ಮಂಗಳೂರು ಮತ್ತು ಯೇನೋಪೋಯ ಆಸ್ಪತ್ರೆ ದೇರಳಕಟ್ಟೆ ಸಹಕಾರದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ( ಜನಾರ್ಧನ ಶಾಲೆ)ಯಲ್ಲಿ ಜ. 21ರಂದು ಏರ್ಪಡಿಸಲಾಗಿದೆ.

ಬೆಳಗ್ಗೆ 9.00 ರಿಂದ ಅಪರಾಹ್ನ 2.00 ವರೆಗೆ ಉಚಿತ ವೈದ್ಯಕೀಯ ಶಿಬಿರ ನಡೆಯಲಿದ್ದು ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯಲು ಕೋರಲಾಗಿದೆ.

ಶಿಬಿರದಲ್ಲಿ ಜನರಲ್ ಮೆಡಿಸಿನ್, ಮೂತ್ರಪಿಂಡ ತಪಾಸಣೆ, ಪ್ಯಾಪ್ ಸ್ಮಿಯರ್ , ಮ್ಯಾಮೋಗ್ರಾಮ್ ಸಹಿತ ಸ್ತ್ರೀರೋಗಗಳ ತಪಾಸಣೆ, ಕಣ್ಣಿನ ತಪಾಸಣೆ, ಹಲ್ಲಿನ ತಪಾಸಣೆ, ಸಕ್ಕರೆ ಕಾಯಿಲೆ ತಪಾಸಣೆ, ರಕ್ತದೊತ್ತಡ ತಪಾಸಣೆಯನ್ನು ತಜ್ಞ ವೈದ್ಯರು ನಡೆಸಿಕೊಡಲಿದ್ದಾರೆ. ಎರಡು ಹೈಟೆಕ್‌ ವೈದ್ಯಕೀಯ ಸೇವಾ ವಾಹನಗಳಲ್ಲಿ ಸ್ಥಳದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗುವುದು.

ತಪಾಸಣೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಚಿತ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ 9632711610, 9448770501, 9449208924 ಈ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here