ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

0

ನಿಡ್ಲೆ: 2022-23 ನೇ ಸಾಲಿನ ನಿಡ್ಲೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಜ.19ಮತ್ತು 20ರಂದು ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ರಾಜ ಗುರು ಹೆಬ್ಬಾರ್ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್, ಶ್ರೀಮತಿ ಹೇಮಾವತಿ, ಮೋಹನ್ , ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷಿ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ, ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಕಲಿಕಾ ಹಬ್ಬದ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

ನಿಡ್ಲೆ ಕ್ಲಸ್ಟರ್ ನ 14 ಶಾಲೆಗಳ ಸುಮಾರು 120 ವಿದ್ಯಾರ್ಥಿಗಳು ಶಾಲಾ ಶಿಕ್ಷಕರೊಂದಿಗೆ ಆಗಮಿಸಿ ಕಲಿಕಾ ಹಬ್ಬದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತಸಪಟ್ಟರು. ಶಾಲಾ ಎಸ್ ಡಿ ಎಮ್ ಸಿ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here