Site icon Suddi Belthangady

ಬೆಳಾಲಿನಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಬೆಳಾಲು : ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಹಶೀಲ್ದಾರರವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮತ್ತು ಮೆಸ್ಕಾಂ ಇಲಾಖೆಯ ವಿದ್ಯುತ್ ಅದಾಲತ್ ಅಭಿಯಾನ ಜ.21 ರಂದು ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ನಾಣ್ಯಪ್ಪ ಪೂಜಾರಿ ವಹಿಸಿದ್ದರು. ತಹಶೀಲ್ದಾರ್ ಪೃಥ್ವಿ ಸಾನಿಕ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಕ್ಷಾಪ್ಪ, ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಸರ್ವೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗ, ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಇಲಾಖೆ, ಕಂದಾಯ ಮೊದಲಾದ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಮೋಹನ ಬಂಗೇರ ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಪತ್ರ ಹಸ್ತಾಂತರ ಮಾಡಲಾಯಿತು. ಇಲಾಖೆಯ ಅಧಿಕಾರಿಗಳಿಂದ ಇಲಾಖೆಯ ಮಾಹಿತಿ ನೀಡಿದರು. ಶಾಲಾ ಮಕ್ಕಳಿಂದ ನಾಡ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಂದಾಯ ನಿರೀಕ್ಷಿಕ ಪವಾಡಪ್ಪ ದೊಡಮಣಿ ಪ್ರಾಸ್ತವಿಕವಾಗಿ ಮಾತನಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ ಸ್ವಾಗತಿಸಿ, ಸದಸ್ಯೆ ವಿದ್ಯಾ ಶ್ರೀನಿವಾಸ ಗೌಡ ನಿರೂಪಿಸಿದರು.

Exit mobile version