Site icon Suddi Belthangady

ಶಿಶಿಲ: ಶ್ರೀ ಶಿಶಿಲೇಶ್ವರ ದೇವರಿಗೆ 1008 ಸೀಯಾಳಾಭಿಷೇಕ

ಶಿಶಿಲ: ಶಾಸಕ ಹರೀಶ್ ಪೂಂಜ ರವರ ಸಂಕಲ್ಪದಂತೆ ಶ್ರೀ ಶಿಶಿಲೇಶ್ವರ ದೇವರಿಗೆ 1008 ಸೀಯಾಳಾಭಿಷೇಕವು ಜ.23 ರಂದು ಶಿಶಿಲ ಶ್ರೀ ಶಿಶೀಲೇಶ್ವರ ದೇವಸ್ಥಾನದಲ್ಲಿ ನಡೆಯಿತು.

ನಡೆದ ಧಾರ್ಮಿಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಶಿಶಿಲ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸಂದೀಪ್, ಶಿಬಾಜೆ ಗ್ರಾ.ಪಂ. ಅಧ್ಯಕ್ಷ ರತೀಶ್ ಬೆಂಗಾಳ, ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷ ನವೀನ್ ರೆಖ್ಯಾ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ, ವ್ಯವಸ್ಥಾಪನ ಸಮಿತಿ ಸದಸ್ಯರು, ಗ್ರಾ. ಪಂ. ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ಬಿಜೆಪಿ ಕಾರ್ಯಕರ್ತರು, ಊರ ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.

ಮೋಹನ್ ಜೋಶಿ ಸ್ವಾಗತಿಸಿ ವಂದಿಸಿದರು. ಶ್ರೀನಿವಾಸ ಮೂಡೆತ್ತಾಯ ಪ್ರಾಸ್ತಾವಿಕ ಮಾತನಾಡಿದರು. ಸೂರಜ್ ನೆಲ್ಲಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Exit mobile version