ವೇಣೂರು: ಹೊಕ್ಕಾಡಿಗೋಳಿ ಸ.ಉ.ಪ್ರಾ. ಶಾಲೆಯ ಶಿಕ್ಷಕರ ವರ್ಗಾವಣೆಯನ್ನು ತಡೆಹಿಡಿಯುವಂತೆ ಶಾಸಕ ಹರೀಶ್ ಪೂಂಜ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವೈಜ್ಞಾನಿಕವಾಗಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಪಡೆದುಕೊಂಡು ಶಾಸಕರು ಶಾಲಾಭಿವೃದ್ಧಿ ಸಮಿತಿಯೊಂದಿಗೆ ಮಾರುಕತೆ ನಡೆಸಿ, ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರಬಾರದು. ಹೊಕ್ಕಾಡಿಗೋಳಿ ಶಾಲೆಯ ಶಿಕ್ಷಕರ ವರ್ಗಾವಣೆ ಮಾಡದಂತೆ ಅಧಿಕಾರಿಗಳಿಗೆ ತಕ್ಷಣವೇ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಹುಲಿಮೇರು ತಿಳಿಸಿದ್ದಾರೆ.
p>