ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

0

ಧರ್ಮಸ್ಥಳ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ತಹಶೀಲ್ದಾರ್ ಪ್ರಥ್ವಿ ಸಾನಿಕಂ ಕೆ .ಎಸ್ ದೀಪ ಪ್ರಜ್ವಾಲನೆಯೊಂದಿಗೆ ಉದ್ಘಾಟಿಸಿದರು.

ತದನಂತರ ಮಾತನಾಡುತ್ತಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಯೋಗ ಹಾಗೂ ಅದರ ಕಾರ್ಯವೈಖರಿ ಕುರಿತು ಮಾತನಾಡಿದರು. ಪ್ರಥಮ ಚಿಕಿತ್ಸೆ ಏಕೆ ಅದರ ಮಾಹಿತಿ ನಮಗೆ ಏಕೆ ಬೇಕು ಎಂಬುದನ್ನು ವಿವರಿಸಿದರು. ನಂತರ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹರೀಶ್ ಹೆಚ್.ವೈ. ಮಾತನಾಡುತ್ತಾ ಪ್ರಥಮ ಚಿಕಿತ್ಸೆ ಇದರ ಕಾರ್ಯಾಗಾರದ ಕನಸು ಹಾಗೂ ಅದು ನನಸಾದ ರೀತಿ ಹಾಗೂ ಇದರಿಂದ ಮುಂದೆ ವಿದ್ಯಾರ್ಥಿಗಳು ಮಾಡಬೇಕಾಗಿರುವ ಕೆಲಸಗಳೇನು ಎಂಬುದನ್ನು ವಿವರಿಸಿದರು.

ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಹರಿದಾಸ್ ಎಸ್.ಎಂ. ತಾಲೂಕಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಕಾರ್ಯವೈಖರಿ ಹಾಗೂ ಅದರ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು. ಮೈಮ್ ಶೋ ದಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ಸ್ವಾಗತಿಸಿ ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಯಶವಂತ ಪಟವರ್ಧನ್ ಧನ್ಯವಾದವಿತ್ತರು. ಕಾರ್ಯಾಗಾರವನ್ನು ನಡೆಸಿಕೊಡಲು ಡಾ. ಕುಮಾರ್ ವಿ.ಎಲ್. ಸಿ ಶಿವಮೊಗ್ಗ ಆಗಮಿಸಿದ್ದರು. ಭಾರತೀಯ ರೆಡ್ ಕ್ರಾಸ್ ನಿರ್ದೇಶಕ ಪ್ರಮೋದ್ ನಾಯಕ್, ಜಾನ್ ಆರ್ವಿನ್ ಡಿಸೋಜಾ, ಶಿವಕುಮಾರ್ ಇವರು ಆಗಮಿಸಿದ್ದರು. ಶಾಲಾ ಶ್ರೀಮತಿ ಪರಿಮಳ ಎಂ ವಿ ಕಾರ್ಯಕ್ರಮದ ಉಸ್ತುವಾರಿಯನ್ನು ಹೊಂದಿದ್ದರು. ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಶಾಲೆಯಿಂದ ಹಾಗೂ ಕಾಲೇಜಿನಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಥಮ ಚಿಕಿತ್ಸೆ ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here