ಮಡಂತ್ಯಾರು: ನಿವೃತ್ತ ಪ್ರಾಧ್ಯಾಪಕರ ಬೀಳ್ಕೊಡುಗೆ ಸಮಾರಂಭ ಹಾಗೂ ಪ್ರತಿಭಾ ಪ್ರದರ್ಶನ

0

ಮಡಂತ್ಯಾರು: ನಿವೃತ್ತ ಪ್ರಾಧ್ಯಾಪಕರ ಬೀಳ್ಕೊಡುಗೆ ಸಮಾರಂಭ ಹಾಗೂ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ.*ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ನಿವೃತ ಪ್ರಾಧ್ಯಾಪಕರು ಹಾಗೂ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿದ್ದ ಪ್ರೊ.ವಿನ್ಸೆಂಟ್ ಡಿ’ಸೋಜಾರವರ ಬೀಳ್ಕೊಡುಗೆ ಸಮಾರಂಭ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಜ. 24 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ಬೇಸಿಲ್ ವಾಸ್ ರವರು ಕಾಲೇಜಿನ ಮಾಗಸಿನ್ ಪವಿತ್ರ ಪುಸ್ತಕವನ್ನು ಲೋಕಾರ್ಪಣೆ ಗೈದರು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಸಂಸ್ಥೆಯಲ್ಲಿ 10 ವರ್ಷಗಳ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ನಿವೃತರಾದ ಪ್ರೊ.ವಿನ್ಸೆಂಟ್ ಡಿ’ಸೋಜಾರವರನ್ನು ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು ತನ್ನ 37 ವರ್ಷಗಳ ಅಧ್ಯಾಪನ ವೃತ್ತಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವುದಕ್ಕೆ ಹೆಮ್ಮೆಯಿದೆ. ಪ್ರಾಧ್ಯಾಪಕನಾಗಿ ವಿವಿಧ ಕಾಲೇಜುಗಳಲ್ಲಿ ಸೇವೆಯನ್ನು ಸಲ್ಲಿಸಿದ ನೆನಪುಗಳನ್ನು ಹಂಚಿಕೊಂಡ ಅವರು ಜೀವನದಲ್ಲಿ ಸಮಯ ಪ್ರಜ್ಞೆ ಹಾಗೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಉತ್ತಮ ಮಾನವರಾಗಿ ಬದುಕಲು ಶ್ರಮಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೊ.ಈಶ್ವರ್ ಗೌಡ , ವಿದ್ಯಾರ್ಥಿಗಳಾದ ಪವನ್ ಶೆಟ್ಟಿ ಹಾಗೂ ಪ್ರತೀಕ್ಷರವರು ಅವರ ಬಗೆಗಿನ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೋಸೆಫ್ ಎನ್.ಎಂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಮಾರಂಭದ ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ.ಜೆರಾಲ್ಡ್ ಮೋರಸ್, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ.ಫ್ರಾನ್ಸಿಸ್ ವಿ.ವಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಘಟಿಸಿದ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ.ಪ್ರಕಾಶ್ ಕ್ರಮಧಾರಿ ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ.ಅಲೆಕ್ಸ್ ಐವನ್ ಸಿಕ್ವೆರಾ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ರಾಜೇಶ್ವರಿ ಹಾಗೂ ಆಂಗ್ಲ ಭಾಷಾ ಪ್ರಾಧ್ಯಾಪಕಿ ಪ್ರೊ. ಆಶಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿಧ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜರಗಿತು. ಸ್ಪರ್ಧೆಯ ತೀರ್ಪುಗಾರರಾಗಿ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕಿ ಕು.ಸುಶ್ಮಿತಾ ಪಿ.ಡಿ, ಎಸ್.ಡಿ.ಎಂ ಸೆಕೆಂಡರಿ ಸ್ಕೂಲ್ ಅಧ್ಯಾಪಕ.ರಮೇಶ್ ಮಯ್ಯ, ವಾಣಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ.ಅನುರಾಧ ಕೆ. ರಾವ್ ಸಹಕರಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ 10 ತಂಡಗಳ ಪೈಕಿ ದ್ವಿತೀಯ ಬಿ.ಕಾಂ ‘ಎ’ ಪ್ರಥಮ ಸ್ಥಾನ ಹಾಗೂ ತೃತೀಯ ಬಿ.ಕಾಂ ‘ಎ’ ದ್ವಿತೀಯ ಸ್ಥಾನವನ್ನು ತಂಡ ಪ್ರಶಸ್ತಿ ಪಡೆದುಕೊಂಡಿತು.

LEAVE A REPLY

Please enter your comment!
Please enter your name here