ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧ ಬೆಳ್ತಂಗಡಿಯಲ್ಲಿ ಜ.26 ರಂದು ನಡೆಯಿತು.
ಧ್ವಜಾರೋಹಣವನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿ ಸಾನಿಕಂ ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸರ್ಕಲ್ ಇನ್ಸಪೆಕ್ಟರ್ ಯೋಗೀಶ್.ಬಿ, ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ, ಬಿಸಿಎಂ ಇಲಾಖೆ ಜೋಸೆಫ್, ಸಿಡಿಪಿಒ ಪ್ರಯಾ ಆಗ್ನೇಸ್, ಅಕ್ಷರಾದಾಸೋಹ ನಿರ್ದೇಶಕಿ ತಾರಾಕೇಸರಿ, ಗೃಹ ರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಲಾಯಿಲ,ಬೆಳ್ತಂಗಡಿ ಪಟ್ಟಣ ಪಂ. ಮುಖ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಳೆದ ಎಸ್ಎಸ್ಎಲ್ ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗುರುವಾಯನಕೆರೆ ಮತ್ತು ಕೊಯ್ಯೂರು ಶಾಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕುಸುಮಾಧರ್ ಸ್ವಾಗತಿಸಿ, ರಾಜೇಶ್ ಸಿಆರ್ ಪಿ ಕಾರ್ಯಕ್ರಮ ನಿರೂಪಿಸಿದರು.