ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

p> ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಗಣರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.ಎಲ್ಲರಿಗೂ ಸಿಹಿತಿಂಡಿ ಹಂಚಿ ಗಂರಾಜ್ಯೋತ್ಸವವನ್ನು ಆಚರಿಸಿದರು. p>