Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜನವರಿ 26ರಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.


ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಬೊನವೆಂಚರ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ನಮ್ಮ ದೇಶದ ಸುವ್ಯವಸ್ಥಿತ ಆಡಳಿತವು ಸಂವಿಧಾನಾತ್ಮಕವಾಗಿದೆ.


ಭಾರತೀಯರಾದ ನಾವೆಲ್ಲ ಸಂವಿಧಾನವನ್ನು ಅರಿತು ಬಾಳಬೇಕೆಂದು ನುಡಿದು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.


ಈ ಮಹತ್ವ ದಿನದ ಆಚರಣೆಗೆ ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಾಕ್ಷಿಯಾದರು.
ವಿದ್ಯಾರ್ಥಿಗಳಾದ ಆಸ್ಟಿನ್ ಫೆರ್ನಾಂಡಿಸ್ ವಂದಿಸಿ, ಶಿವಾನಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version