Site icon Suddi Belthangady

ಧರ್ಮಸ್ಥಳ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ


ಧರ್ಮಸ್ಥಳ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಲೋಲಾಕ್ಷ ನೆರವೇರಿಸಿದರು.

ಅವರು ಮಾತನಾಡಿ ಭಾರತದ ಸಂವಿಧಾನದ ಮಹತ್ವ ಹಾಗೂ ಅದನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಅದನ್ನು ಪಾಲಿಸುವ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ತದನಂತರ ವಿದ್ಯಾರ್ಥಿಗಳಿಂದ ಯುವ ಸಂಸತ್ತು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ. ಭಾರತದ ಸಂವಿಧಾನ ಅದರ ಪರಂಪರೆ ಹಾಗೂ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಲೆಯ ಪಾತ್ರ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ತಿಳಿಯಪಡಿಸಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version