ಅಟ್ಲಾಜೆ: ಸ.ಕಿ.ಪ್ರಾ.ಶಾಲೆ ಅಟ್ಲಾಜೆ ಇಲ್ಲಿಯ 25ನೇ ವರ್ಷದ ಬೆಳ್ಳಿಹಬ್ಬದ ಸಂಭ್ರಮಾಚರಣೆ ಹಾಗೂ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ದಶಮಾನೋತ್ಸವ ಕಾರ್ಯಕ್ರಮವು ಜ.26ರಂದು ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂದೇಶ್ ಪೆರಾಜೆ ಧ್ವಜಾರೋಹಣವನ್ನು ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಗ್ಯಾಲರಿ ಉದ್ಘಾಟಿಸಿದರು. ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಂಜ ಗ್ರಾ.ಪಂ.ಅಧ್ಯಕ್ಷ ಹೇಮಂತ್ ಅಧ್ಯಕ್ಷತೆಯನ್ನು ವಹಿಸಿದ್ದರು. ಚಲನಚಿತ್ರ ನಟ, ನಿರ್ಮಾಪಕ ಮತ್ತು ಚಿಂತಕ ತಮ್ಮಣ್ಣ ಶೆಟ್ಟಿ ಮಕ್ಕಳಲ್ಲಿ ಆಚಾರ, ವಿಚಾರ, ನಂಬಿಕೆ, ಮತ್ತು ನಡವಳಿಕೆಯ ಪ್ರಾಮುಖ್ಯತೆಯ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಉಪಾಧ್ಯಕ್ಷೆ ಬೇಬಿ ನಾರಾಯಣ, ಗ್ರಾ.ಪಂ. ಸದಸ್ಯ, ಸರ್ವೋದಯ ಫ್ರೆಂಡ್ಸ್ ಇದರ ಅಧ್ಯಕ್ಷ ಯಶೋಧರ ಶೆಟ್ಟಿ, ಬಳಂಜ ಗ್ರಾ.ಪಂ ಸದಸ್ಯರಾದ ಸುಚಿತ್ರಾ, ಯಕ್ಷಿತಾ ದೇವಾಡಿಗ, ಮಂಗಳೂರು ಕೊಡಗು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಸಾನ್ವಿ ಗ್ರೂಪ್ ಆಫ್ ಕಂಪೆನಿ ಮತ್ತು ಅನ್ನಪೂರ್ಣ ಹಾಸ್ಪಟಲಿಟಿ ಸಿ.ಇ.ಒ ಹರೀಶ್ ಶೆಟ್ಟಿ ಕಂರ್ಬಿತ್ತಿಲು ನಾಲ್ಕೂರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಪೆರೋಡಿತ್ತಾಯಕಟ್ಟೆ ಕ್ಲಸ್ಟರ್ ನ ಸಿ ಆರ್ ಪಿ ಕಿರಣ್ ಕುಮಾರ್ ಕೆ.ಎಸ್., ಕಾರ್ಯದರ್ಶಿ ಚಿತ್ರನ್ ದೇವಾಡಿಗ, ಅಟ್ಲಾಜೆ .ಕಿ.ಪ್ರಾ. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಪ್ರಮೋದ್ ಎಸ್., ಕ್ರೀಡಾ ಕಾರ್ಯದರ್ಶಿ ಸುಭಾಷ್ ಹೆಚ್., ಸಹಶಿಕ್ಷಕಿ ಅನಸೂಯ ಕುಮಾರಿ ಕೆ., ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಮತ್ತು ಊರವರು ಉಪಸ್ಥಿತರಿದ್ದರು.
ಬಳಂಜ ಗ್ರಾ.ಪಂ. ಮಾಜಿ ಅಧ್ಯಕ್ಷೆ ರತ್ನ ಹೇವ, ಶಾಸಕ ಹರೀಶ್ ಪೂಂಜ ಸಾನ್ವಿ ಗ್ರೂಪ್ ಆಫ್ ಕಂಪೆನಿ ಮತ್ತು ಅನ್ನಪೂರ್ಣ ಹಾಸ್ಪಟಲಿಟಿ ಸಿ.ಇ.ಒ ಹರೀಶ್ ಶೆಟ್ಟಿ ಕಂರ್ಬಿತ್ತಿಲು ನಾಲ್ಕೂರು ಇವರುಗಳನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ ಕಾಪು ರಂಗತರಂಗ ಕಲಾವಿದರ ತಂಡದಿಂದ ಅಧ್ಯಕ್ಷೆರ್ ತುಳು ಹಾಸ್ಯಮಯ ನಾಟಕ ಜರುಗಿತು.
ಸಂತೋಷ್ ಪಿ. ಕೋಟ್ಯಾನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಚಂದ್ರಹಾಸ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಪ್ರಣಾಮ್ ವಂದಿಸಿದರು.