ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಮತ್ತು ಎನ್.ಎಸ್.ಎಸ್ ಘಟಕದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಾಂಶುಪಾಲೆ ಜಾಲಿ ಡಿ’ಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಣರಾಜ್ಯೋತ್ಸವ ದಿನದ ಹಿನ್ನೆಲೆ ಹಾಗೂ ಸಂವಿಧಾನದ ಮಹತ್ವವನ್ನು ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರೇಂಜರ್ ವಿದ್ಯಾರ್ಥಿನಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿ, ಕೀರ್ತನಾ ಎ.ಎಸ್ ಸ್ವಾಗತಿಸಿದರು, ವಿಂಧ್ಯಾ ವಂದಿಸಿದರು.

LEAVE A REPLY

Please enter your comment!
Please enter your name here