ವೇಣೂರು: ಅಜಿಲ ಸೀಮೆಗೆ ಒಳಪಟ್ಟ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.18 ರಿಂದ 27ರವರೆಗೆ ಜರಗಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಜ.28 ರಂದು ಚಪ್ಪರ ಮುಹೂರ್ತ ನೆರವೇರಿತು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಚಪ್ಪರ ಮುಹೂರ್ತ ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ., ಸೋಮಯ್ಯ ಮೂಲ್ಯ ಹನೈನಡೆ, ಪ್ರಧಾನ ಕಾರ್ಯದರ್ಶಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ತಾಂತ್ರಿಕ ಸಮಿತಿಯ ಸಂಚಾಲಕ ಯಜ್ಞನಾರಾಯಣ ಭಟ್ ಹಾಗೂ ವಿವಿಧ ಸಮಿತಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕ್ಷೇತ್ರದ ತಂತ್ರಿಗಳಾದ ವೇ|ಮೂ| ಶ್ರೀಪಾದ ಪಾಂಗಣ್ಣಾಯರು ಪೂಜಾ ವಿಧಿ ವಿಧಾನ ನೆರವೇರಿಸಿದರು.
p>