ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 28ನೇ ನೂತನ ಶಾಖೆಯು ಕುದ್ಯಾಡಿಗುತ್ತು ಬಿಲ್ಡಿಂಗ್ ನಲ್ಲಿ ಜ.28 ರಂದು ಉದ್ಘಾಟನೆಗೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ವಹಿಸಿದ್ದರು.
ನೂತನ ಶಾಖೆಯನ್ನು ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಉದ್ಘಾಟಿಸಿ ಶುಭಕೋರಿದರು. ದೀಪ ಪ್ರಜ್ವಲನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಕಾಪಿನಡ್ಕ ನೇರವೇರಿಸಿ ಶುಭಕೋರಿದರು. ಭದ್ರತಾ ಕೋಶ ಉದ್ಘಾಟನೆಯನ್ನು ಅಳದಂಗಡಿಯ ಖ್ಯಾತ ವೈದ್ಯ ಡಾ. ಎನ್.ಎಂ ತುಳಪುಳೆ ನೇರವೇರಿಸಿದರು. ಗಣಕೀಕೃತ ಬ್ಯಾಂಕಿಂಗ್ ಗೆ ಅಳದಂಗಡಿ ಹಾ.ಉ.ಉತ್ಪಾದಕರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಚಾಲನೆ ನೀಡಿದರು.
ವೇದಿಕೆಯಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರ್, ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಅಳದಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕೊಡಂಗೆ, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ನಿಕಟಪೂರ್ವ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ಕುದ್ಯಾಡಿಗುತ್ತು ಕಟ್ಟಡ ಮಾಲಕ ವಿಶ್ವನಾಥ ಪೂಜಾರಿ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಗೋಪಾಲ್ ಎಮ್, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎಜಿಎಮ್ ವಿಶ್ವನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಶಾಖಾಧಿಕಾರಿ ಕಾವ್ಯಶ್ರೀ ಅನಿಲ್ ಕುಮಾರ್ ಯು. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.