ಬೆಳಾಲು: ಮಾಯ ಮಹಾದೇವ ದೇವಸ್ಥಾನದ ಜಾತ್ರೋತ್ಸವ ಸಮಾಲೋಚನಾ ಸಭೆ

0

ಬೆಳಾಲು: ಇಲ್ಲಿಯ ಮಾಯ ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಮಾ.3 ರಿಂದ 7 ರ ವರೆಗೆ ನಡೆಯಲಿದ್ದು ಇದರ ಅಂಗವಾಗಿ ಗ್ರಾಮಸ್ಥರ ಸಮಾಲೋಚನಾ ಸಭೆ ಜ.29 ರಂದು ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್. ಪದ್ಮ ಗೌಡ ರವರ ಅಧ್ಯಕ್ಷೆಯಲ್ಲಿ ನಡೆಯಿತು.

ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಉಪ ಸಮಿತಿ ರಚಿಸಲಾಯಿತು. ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ನಾಣ್ಯಪ್ಪ ಪೂಜಾರಿ, ಮಾಯ ಗುತ್ತು ಪುಷ್ಪದಂತ ಜೈನ್, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶಿವ ಕುಮಾರ್ ಬಾರಿತ್ತಾಯ ಪಾರಳ, ರಾಜಪ್ಪ ಗೌಡ, ನಾಣ್ಯಪ್ಪ ಪೂಜಾರಿ, ಗಂಗಯ್ಯ ಗೌಡ,ದಿನೇಶ್ ಎಂ. ಕೆ. ಚಂದ್ರಾವತಿ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಮಾಯಾ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಸೇವಾ ಪ್ರತಿನಿಧಿ ಪ್ರಭಾ ದಿನೇಶ್,ಮಾಯಾ ಮಹೇಶ್ವರ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ, ವರ ಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶೀಲಾವತಿ, ಮಾಯಾ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಗೌಡ, ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿನೇಶ್ ಕೋಟ್ಯಾನ್,ಸುರೇಂದ್ರ ಗೌಡ, ಕೃಷ್ಣಯ್ಯ ಆಚಾರ್ಯ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಹಾಜರಿದ್ದು ಸಲಹೆ ಸೂಚನೆ ನೀಡಿದರು.

ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಶೇಖರ ಗೌಡ ಕೊಲ್ಲಿಮಾರು ನಿರೂಪಿಸಿದರು.

LEAVE A REPLY

Please enter your comment!
Please enter your name here