ಮಂಜೊಟ್ಟಿ : ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

0

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಜನಾಬ್ ಸೈಯದ್ ಹಬೀಬ್ ಧ್ವಜಾರೋಹಣವನ್ನು ಮಾಡಿ ಮಾತನಾಡಿ ” ಸರ್ವಧರ್ಮ ಸಹಿಷ್ಣುತೆಗೆ ಹೆಸರಾದ ದೇಶ ನಮ್ಮದು. ಮಕ್ಕಳೆಲ್ಲ ಅದೇ ಭಾವನೆಯಲ್ಲಿ ಬೆಳೆದು ಈ ದೇಶದ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಅಯ್ಯುಬ್, ಕೋಶಾಧಿಕಾರಿಯಾದ ಸೈಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ನಡೆದ ಸುಂದರವಾದ ಪಥಸಂಚಲನದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಸಹಶಿಕ್ಷಕಿ ಶ್ರೀಮತಿ ನುಸೈಭಾ ಹಾಗೂ ಕುಮಾರಿ ಶಮೀರಾ ನೆರವೇರಿಸಿದರು. ಶಿಕ್ಷಕ ಬೇಬಿ ಅತಿಥಿಗಳನ್ನು ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಭಾರತಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here