ಫೆ. 5-9: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

0

ಮರೋಡಿ:ಬೆಳ್ತಂಗಡಿ ತಾಲೂಕು ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಪ್ರದಾಯವಾಗಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ 5 ರಿಂದ 9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಫೆ. 5 ರಂದು ಕ್ಷೇತ್ರದಲ್ಲಿ ನಿತ್ಯಪೂಜೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.ಫೆ6 ರಂದು ತೋರಣ ಮುಹೂರ್ತ, ಧ್ವಜಾರೋಹಣ, ದೊಡ್ಡ ರಂಗಪೂಜೆ,ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ,ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ,ಕುಣಿತಾ ಭಜನೆ, ಅನ್ನಸಂತರ್ಪಣೆ ನಡೆಯಲಿದೆ. ನಂತರ ಸ್ಥಳಿಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಭರಣಿ ಕೃತಿಕೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ಫೆ 7ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೋಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೋಜನೆಯ ಜಿಲ್ಲಾ ನಿರ್ದೇಶಕ ಸತಿಶ್ ಶೆಟ್ಟಿ, ಮರೋಡಿ ಗ್ರಾ.ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್,ದೇವಸ್ಥಾನದ ಕಾರ್ಯದರ್ಶಿ ಜಯಂತ್ ಕೋಟ್ಯಾನ್ ಭಾಗವಹಿಸಲಿದ್ದಾರೆ. ನಂತರ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟಬಂಧನ, ಪಟ್ಟದಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಕುಣಿತ ಭಜನೆ ನಡೆಯಲಿದೆ.

ಫೆ.8, ವೈದಿಕ ವಿಧಿ ವಿಧಾನಗಳು, ಬೆಳಿಗ್ಗೆ ಆಶ್ಲೇಷಬಲಿ, ಮಹಾಪೂಜೆ (ತುಲಾಭಾರ ಸೇವೆ) ಚೂರ್ಣೋತ್ಸವ , ದರ್ಶನಬಲಿ, ಬಟ್ಟಲುಕಾಣಿಕೆ, ಪ್ರಸಾದ ವಿತರಣೆ, ಪಲ್ಲಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಯಾತ್ರಾಹೋಮ, ರಾತ್ರಿ ಧಾರ್ಮಿಕ ಸಭೆ, ಬಲಿಉತ್ಸವ, ಸಿರಿಗಳ ಜಾತ್ರೆ ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಃಣ, ಮಹಾಪೂಜೆ,ರಾತ್ರಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಹಳೆಯಂಗಡಿ-ಇವರಿಂದ ಶ್ರೀ ಸತೀಶ್ ಶೆಟ್ಟಿ ಇವರ ಅಮೋಘ ಭಾಗವತಿಕೆಯೊಂದಿಗೆ ಯಕ್ಷಗಾನ (ಕಾಲಮಿತಿ) ಪ್ರದರ್ಶನಗೊಳ್ಳಲಿದೆ. ಫೆ 9 ರಂದು ಸಂಪ್ರೋಕ್ಷಣೆ, ಮಂಗಳಾ ಪ್ರಸಾದ ವಿತರಣೆ,ಸ್ಥಳಿಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನದ ಆಡಳಿತ ಮೋಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here