ಬೆಳ್ತಂಗಡಿ: ಬಸವಣ್ಣ, ಅಕ್ಕಮಹಾದೇವಿ ಮೊದಲಾದವರ ಸಾಲಿನಲ್ಲಿರುವ ಮಡಿವಾಳ ಮಾಚೀದೇವರು ಸಾಮಾಜಿಕ ಪರಿವರ್ತನೆಯ ಹರಿಕಾರರು ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು
ಅವರು ಫೆ.1ರಂದು ಮಿನಿವಿಧಾನಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಮಡಿವಾಳ ಮಾಚೀದೇವ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂತರ, ದಾರ್ಶನಿಕರ ಜಯಂತಿಯ ಆಚರಣೆ ಮಾತ್ರವಲ್ಲದೆ ಅವರ ಜೀವನ ಚರಿತ್ರೆಯನ್ನು ಓದಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ಬೆಳ್ತಂಗಡಿ ತಾಲೂಕು ಮಡಿವಾಳ ಸಮಾಜ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕೆ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ತಹಶಿಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ತಾಲೂಕು ಮಡಿವಾಳ ಸಮಾಜ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಮಡಿವಾಲ ಪಿಲಾತಬೆಟ್ಟು, ಕಲ್ಮಂಜ ಗ್ರಾಪಂ ಅಧ್ಯಕ್ಷ ಶ್ರೀಧರ ಮಡಿವಾಳ ನಿಡಿಗಲ್ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಧರ್ಣಪ್ಪ ಧರ್ಮಸ್ಥಳ ಉಪನ್ಯಾಸ ನೀಡಿದರು. ತಾಲ್ಲೂಕು ಕಚೇರಿ ಸಿಬ್ಬಂದಿ ಹೇಮಾ ಸ್ವಾಗತಿಸಿ, ತಾಲ್ಲೂಕು ಪಂಚಾಯತ್ ಸಂಯೋಜಕ ಜಯಾನಂದ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ತಾಲೂಕು ಮಡಿವಾಳರ ಸಂಘದ ಕೋಶಾಧಿಕಾರಿ ರಾಜೇಶ್ ಪೆಂರ್ಬುಡ ವಂದಿಸಿದರು.
ತಾಲೂಕು ಮಟ್ಟದಲ್ಲಿ ಮಡಿವಾಳ ಮಾಚೀದೇವ ಜಯಂತಿ ಆಚರಣೆ
p>