ಫೆ. 8: ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

0

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ಗುಂಡೂರಿ ತುಂಬೆದಲೆಕ್ಕಿಯಲ್ಲಿರುವ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ಫೆ. 8ರಂದು 49ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಮೇಳದವರಿಂದ ನಳ ದಮಯಂತಿ ಯಕ್ಷಗಾನ ಬಯಲಾಟ ಜರಗಲಿದೆ.
ಶ್ರೀ ಸತ್ಯನಾರಾಯಣ ಪೂಜಾ ಭಜನ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಗುಂಡೂರಿ ಇವುಗಳ ಜಂಟಿ ಆಶ್ರಯದಲ್ಲಿ ಜರಗುವ ಈ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಭಜನ ಮಂಡಳಿ ಅಧ್ಯಕ್ಷರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ರಾಜು ಪೂಜಾರಿ ಹಾಗೂ ಸೇವಾಪ್ರತಿನಿಧಿ ಹರೀಶ್ ಬಾಡಾರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here