Site icon Suddi Belthangady

ಪಜಿರಡ್ಕ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಐದನೇ ದಿನ ಫೆ.4 ರಂದು ಧಾರ್ಮಿಕ ಸಭೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಧಾರ್ಮಿಕ ಶುಭ ಶಂಸನೆ ನೀಡಿದರು. ಧರ್ಮಸ್ಥಳ ಎಸ್ ಕೆ ಡಿ ಆರ್ ಡಿ ಪಿ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್,, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ, ,ಅನಂತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಮುಂಡಾಜೆ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ ಭಟ್, ನಿಡಿಗಲ್ ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ್ ಪ್ರಭು ಎಸ್ ಕೆ ಆರ್. ಡಿ ಪಿ. ಯೋಜನೆಯ ಕಾರ್ಯನಿರ್ವಾಹಕ ಅನಿಲ್ ಕುಮಾರ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಸ ಸಮಿತಿಯ ಕಾರ್ಯದರ್ಶಿ ಮಂಜುನಾಥ ಶೆಟ್ಟಿ ನಿಡಿಗಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹೆಗ್ಗಡೆಯವರನ್ನು ಮತ್ತು ಗಣ್ಯರನ್ನು ಪೂರ್ಣ ಕುಂಭ ಸ್ವಾಗತ ದೊಂದಿಗೆ ಕರೆತರಲಾಯಿತು.

ಇದೆ ಸಂದರ್ಭದಲ್ಲಿ ಕ್ಷೇತ್ರದ ಪರಿಚಯದ “ಸಂಗಮಶ್ರೀ” ಸ್ಮರಣ ಸಂಚಿಕೆಯನ್ನು ಡಾ. ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು. ಸಹಕಾರ ನೀಡಿದ ಶಾಸಕ ಹರೀಶ್ ಪೂಂಜಾ, ಸ್ಮರಣ ಸಂಚಿಕೆಯ ಸಂಪಾದಕ ಚಂದ್ರಶೇಖರ ಅಂತರ, ದಾನಿ ಉದ್ಯಮಿ ಆರ್. ಬಸವರಾಜ್ ಬೆಂಗಳೂರು ಮತ್ತು ಇತರ ದಾನಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಸಂಚಾಲಕರು ಸದಸ್ಯರು, ಊರ ಪರ ಊರ ಭಕ್ತರು ಭಾಗವಹಿಸಿದ್ದರು.

Exit mobile version