ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆರನೇ ದಿನ ಫೆ.5 ರಂದು ಬೆಳಿಗ್ಗೆ ಶ್ರೀ ಸದಾಶಿವೇಶ್ವರ ದೇವರ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಪರಿವಾರ ದೇವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ದೈವಗಳಿಗೆ ಕಲಶಾಭಿಷೇಕ, ಪರ್ವ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣಅರ್ಚಕ ಪುರೋಹಿತ ಪರಿಷತ್ ತಾಲೂಕು ಘಟಕದ ನೇತೃತ್ವದಲ್ಲಿ ರುದ್ರ ಪಾರಾಯಣ, ಭಕ್ತರಿಂದ ದೇವರಿಗೆ ಪಲ್ಲಕಿ ಸಮರ್ಪಣೆ, ಕನ್ಯಾಡಿ ಭಕ್ತ ಪ್ರಿಯ ಭಜನಾ ಮಂಡಳಿ ಮತ್ತು ನಿಡಿಗಲ್ ಶ್ರೀ ಸತ್ಯ ನಾರಾಯಣ ಭಜನಾ ಮಂಡಳಿಯಿಂದ ಭಜನೆ ನಡೆಯಿತು.ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ರಾಮ ಕ್ಷೇತ್ರ ಮಹಸಂಸ್ಥಾನಮ್ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಉಜಿರೆ ಶ್ರೀ ಧ. ಮ. ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್.,ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಬಿ. ಎಸ್. ರಾಘವೇಂದ್ರ ಭಟ್, ಬಳ್ಳಾರಿ ಎಚ್. ಎಂ. ಎನ್. ಆರ್. ಮೈನಿಂಗ್ ಕಂಪನಿ ಮಾಲಕರು ಬಿ. ಎಂ. ಪಾರ್ವತಿ ರಂಗಾ ರೆಡ್ಡಿ, ಜಿ ಪ. ಮಾಜಿ ಸದಸ್ಯ ಇ. ಸುಂದರ ಗೌಡ, ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಂತ ಗೌಡ, ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೈವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿನೇಶ್ ಪಟವರ್ಧನ್, ಮುಂಡಾಜೆ, ದೇವಸ್ಥಾನದ ಮಾಜಿ ಮೊಕ್ತೇಸರ ಬಾಲಚಂದ್ರ ರಾವ್ ಗುತ್ತು, ಭಾಗವಹಿಸಿದ್ದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಸ ಸಮಿತಿಯ ಕಾರ್ಯಧ್ಯಕ್ಷ ತುಕಾರಾಮ ಸಾಲಿಯಾನ್ ಅರ್ಲ,ಕಾರ್ಯದರ್ಶಿ ಮಂಜುನಾಥ ಶೆಟ್ಟಿ ನಿಡಿಗಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಉಪ ಸಮಿತಿಯ ಸಂಚಾಲಕರು ಸದಸ್ಯರು, ಊರ ಪರ ಊರ ಭಕ್ತರು ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ರವಿ ಕುಮಾರ್ ಭಟ್ ಸ್ವಾಗತಿಸಿದರು, ಕಾರ್ಯಾಧ್ಯಕ್ಷ ತುಕಾರಾಮ ಸಾಲಿಯಾನ್ ಆರ್ಲ ಪ್ರಾಸ್ತವಿಕವಾಗಿ ಮಾತನಾಡಿದರು. ನಾರಾಯಣ ಫಡ್ಕೆ ಮುಂಡಾಜೆ ನಿರೂಪಿಸಿದರು