ಬೆಳ್ತಂಗಡಿ :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಫೆ.11 ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ದೇವರಾಜ್ ಎಚ್. ಎಂ. ಮತ್ತು ಸಿವಿಲ್ ನ್ಯಾಯಾಧೀಶರು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ಈ ಅದಾಲತ್ ನಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿಯಲ್ಲಿ ಮುಗಿಸಲಾಗುವುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಗಳಾದ ರಾಜಿಯಾಗ ಬಲ್ಲ ಅಪರಾಧ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಆರ್ಥಿಕ ವಸೂಲಾತಿ ಪ್ರಕರಣ, ಮೋಟಾರು ಅಪಘಾತ ಪರಿಹಾರ ಪ್ರಕರಣ, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನ ಸಂಬಂಧಿಸಿದ ಕ್ಲೇಮ್ ಗಳು ಮೊದಲಾದ ಪ್ರಕರಣವನ್ನು ಸ್ಥಳದಲ್ಲಿಯೇ ಇತ್ಯಾರ್ಥ ಮಾಡಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳ ಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ. ಎಸ್., ಕಾರ್ಯದರ್ಶಿ ಶೈಲೇಶ್ ಠೋಸರ್, ವಕೀಲರುಗಳು, ಕಾನೂನು ಸೇವಾ ಸಮಿತಿ ಸದಸ್ಯರು ಹಾಜರಿದ್ದರು.