ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

0

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶ್ರೀ ಮಹಾಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ ವಿಶೇಷ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪಠಣ ನಡೆಸಲಾಯಿತು.

ಬೆಳಿಗ್ಗೆ ಗಂಟೆ 7 ರಿಂದ 8 ಗಂಟೆಯವರೆಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಸದಸ್ಯರಿಂದ ಸಾಮೂಹಿಕ ವಿಷ್ಣು ಸಹಸ್ರ ನಾಮಪಠಣ ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಡಾ. ಪ್ರದೀಪ್ ನಾವೂರು, ಹರೀಶ್ ಸಾಲಿಯಾನ್, ಗಣೇಶ್ ಗೌಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವ್ಯವಸ್ಥಾಪನ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here