Site icon Suddi Belthangady

ಉಜಿರೆ ಲಾಡ್ಜ್ ಗಳಿಗೆ ಡಿವೈಎಸ್ ಪಿ ನೇತೃತ್ವದ ತಂಡ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಎಚ್ಚರಿಕೆ

ಉಜಿರೆ: ಉಜಿರೆಯ ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿಯ ಮೇರೆಗೆ ಫೆ.6 ರಂದು ಡಿವೈಎಸ್ ಪಿ ನೇತೃತ್ವದ ತಂಡ ಲಾಡ್ಜ್ ಗಳಿಗೆ ದಾಳಿ ನಡೆಸಿದೆ.

ದ.ಕ. ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ರವರ, ಮಾರ್ಗದರ್ಶನ ದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ, ಪ್ರತಾಪ್ ಸಿಂಗ್ ಥೋರಾಟ್ ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡಗಳು ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ದಾಳಿ ಮಾಡಿ ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಇತರೆ ದಾಖಲೆಗಳನ್ನು ಪರಿಶೀಲನೆ ಮಾಡಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರ ಮತ್ತು ಭಕ್ತಾದಿಗಳ ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು, ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು, ಎಂದು ಲಾಡ್ಜ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Exit mobile version