Site icon Suddi Belthangady

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಗೆ ಚಾಲನೆ

ಮರೋಡಿ: ಬೆಳ್ತಂಗಡಿ ತಾಲೂಕು ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಪ್ರದಾಯವಾಗಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ.5 ರಂದು ಪ್ರಾರಂಭಗೊಂಡು ಫೆ.9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.

ಕ್ಷೇತ್ರದಲ್ಲಿ ನಿತ್ಯಪೂಜೆ, ತೋರಣ ಮುಹೂರ್ತ, ಧ್ವಜಾರೋಹಣ, ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ,ಕುಣಿತಾ ಭಜನೆ, ಅನ್ನಸಂತರ್ಪಣೆ ನಡೆಯಿತು.

ನಂತರ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ರಾತ್ರಿ ಭರಣಿ ಕೃತಿಕೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾಯಣ ಪೂಜಾರಿ ಮುಂಬಯಿ ಹಾಗೂ ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.

Exit mobile version